ADVERTISEMENT

ಗುವಾಹಟಿ: ರಾಜ್ಯದ ಪ್ರಾಧ್ಯಾಪಕ ಬಂಧನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 18:19 IST
Last Updated 5 ಜನವರಿ 2019, 18:19 IST

ಗುವಾಹಟಿ: ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಗಣಿತ ಪ್ರಾಧ್ಯಾಪಕ, ಕರ್ನಾಟಕದ ಕೆ.ವಿ. ಶ್ರೀಕಾಂತ ಅವರನ್ನು ಶನಿವಾರ ಬಂಧಿಸಲಾಗಿದೆ.

‘ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ’ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಶ್ರೀಕಾಂತ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಅಸ್ಸಾಂನಲ್ಲಿನ ನಲ್ಬರಿಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.