ADVERTISEMENT

ಕರ್ನಾಟಕ ವಿಧಾನ ಪರಿಷತ್‌ನ 4 ಕ್ಷೇತ್ರಗಳಿಗೆ ಚುನಾವಣೆ‌ ಘೋಷಣೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 9:01 IST
Last Updated 29 ಸೆಪ್ಟೆಂಬರ್ 2020, 9:01 IST
   

ನವದೆಹಲಿ: ರಾಜ್ಯ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್‌ 28 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 1 ರಿಂದ ನಾಮಪತ್ರ ಸಲ್ಲಿಸುವ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯ ಅಧಿಸೂಚನೆ‌ ಅಕ್ಟೋಬರ್ 1ರಂದು ಜಾರಿಯಾಗಲಿದೆ.

ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಜೂನ್‌ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್‌.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು.

ADVERTISEMENT

ನಾಮಪತ್ರ ಸಲ್ಲಿಸಲು ಕೊನೆಯ ದಿನ ಅ.8, ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನವಾಗಿದೆ. ಮತಗಳ ಎಣಿಕೆ ನವೆಂಬರ್‌ 2 ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.