ವಿಕ್ರಂ ಮಿಸ್ರಿ
ಎಕ್ಸ್ ಚಿತ್ರ
ನವದೆಹಲಿ: ಕರ್ತಾರ್‌ಪುರ ಕಾರಿಡಾರ್ ಅನ್ನು ಮುಂದಿನ ನಿರ್ದೇಶನದವರೆಗೂ ಮುಚ್ಚಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ನಡೆಯುತ್ತಿದ್ದು ವಿದೇಶಾಂಗ ಸಚಿವಾಲಯ ಹಾಗೂ ರಕ್ಷಣಾ ಸಚಿವಾಲಯ ನಡೆಸಿದ ಜಂಟಿ ಪ್ರತಿಕಾಗೋಷ್ಠಿಯಲ್ಲಿ ಅವರು ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.
ಪಾಕಿಸ್ತಾನ ದಾಳಿಗಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು ಪಾಕ್ ಸುಳ್ಳುಗಳನ್ನು ಹರಡುವ ಮೂಲಕ ಕೋಮು ಗಲಭೆಗೆ ಯತ್ನಿಸುತ್ತಿದೆ ಎಂದು ಹೇಳಿದರು.
ನಂಕಮ ಗುರುದ್ವಾರದ ಮೇಲೆ ಭಾರತ ಡ್ರೋನ್ ದಾಳಿ ನಡೆಸಿದೆ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.