ADVERTISEMENT

ಕರ್ತಾರ್‌ಪುರ ಕಾರಿಡಾರ್‌ ಸಾರ್ವಜನಿಕರಿಗೆ ಮುಕ್ತ

ಪಿಟಿಐ
Published 17 ನವೆಂಬರ್ 2021, 14:16 IST
Last Updated 17 ನವೆಂಬರ್ 2021, 14:16 IST
ಪಾಕಿಸ್ತಾನದಲ್ಲಿರುವ ಕರ್ತಾರ್‌ಪುರ ಗುರುದ್ವಾರ ದರ್ಬಾರ್‌ ಸಾಹಿಬ್‌ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಖ್‌ ಭಕ್ತಾಧಿಗಳು              –ಎಎಫ್‌ಪಿ ಚಿತ್ರ
ಪಾಕಿಸ್ತಾನದಲ್ಲಿರುವ ಕರ್ತಾರ್‌ಪುರ ಗುರುದ್ವಾರ ದರ್ಬಾರ್‌ ಸಾಹಿಬ್‌ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಖ್‌ ಭಕ್ತಾಧಿಗಳು              –ಎಎಫ್‌ಪಿ ಚಿತ್ರ   

ಡೇರಾ ಬಾಬಾ ನಾನಕ್ (ಪಂಜಾಬ್‌): ಕೋವಿಡ್‌–19ನಿಂದಾಗಿ ಮುಚ್ಚಲಾಗಿದ್ದಕರ್ತಾರ್‌ಪುರ ಕಾರಿಡಾರ್‌ ಅನ್ನು 20 ತಿಂಗಳ ಬಳಿಕ ಬುಧವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು. 28 ಸಿಖ್ ಯಾತ್ರಿಕರನ್ನು ಒಳಗೊಂಡ ಮೊದಲ ತಂಡವು ಕರ್ತಾರ್‌ಪುರ ಕಾರಿಡಾರ್‌ ಮೂಲಕ ಪಾಕಿಸ್ತಾನದಲ್ಲಿರುವ ಗುರುದ್ವಾರ ದರ್ಬಾರ್‌ ಸಾಹಿಬ್‌ಗೆ ತೆರಳಿದರು.

ಕರ್ತಾರ್‌ಪುರ ಕಾರಿಡಾರ್‌ ಅನ್ನು ಬುಧವಾರದಿಂದ ತೆರೆಯುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಂಗಳವಾರ ತಿಳಿಸಿದ್ದರು.ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ತಾರ್‌ಪುರ ಕಾರಿಡಾರ್‌ ಮುಚ್ಚಲಾಗಿತ್ತು.

‘ಯಾತ್ರಾರ್ಥಿಗಳು ಕಡ್ಡಾಯವಾಗಿಆರ್‌ಟಿ–ಪಿಸಿಆರ್‌ ವರದಿ ಮತ್ತು ಎರಡೂ ಡೋಸ್‌ಗಳನ್ನು ಪಡೆದಿರುವ ಪ್ರಮಾಣಪತ್ರವನ್ನು ಸಲ್ಲಿಸಬೇಕು’ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.