
ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಸೇರಿದಂತೆ ಪಕ್ಷದ ಹಲವು ಹಿರಿಯ ಪದಾಧಿಕಾರಿಗಳು ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಎದುರು ಸೋಮವಾರ ವಿಚಾರಣೆಗೆ ಹಾಜರಾಗಿದ್ದರು.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ, ಖ್ಯಾತ ನಟ ವಿಜಯ್ ಅವರು ಭಾಗವಹಿಸಿದ್ದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.
ಈ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾದ ಬಳಿಕ ತಮಿಳುನಾಡು ಪೊಲೀಸರು ಕೈಗೆತ್ತಿಕೊಂಡಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ಹಸ್ತಾಂತರಿಸಿತ್ತು.
ಆನಂದ್ ಅವರ ಜತೆಗೆ ಪಕ್ಷದ ಕಾರ್ಯತಂತ್ರ ಪ್ರಧಾನ ಕಾರ್ಯದರ್ಶಿ ಆಧಾವ್ ಅರ್ಜುನ ಅವರೂ ಕರೂರಿನಲ್ಲಿರುವ ಸಿಬಿಐ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.
ಚೆನ್ನೈನಲ್ಲಿರುವ ಟಿವಿಕೆ ಕೇಂದ್ರ ಕಚೇರಿಗೂ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಕೆಲವು ದಾಖಲೆ ಹಾಗೂ ವಿಜಯ್ ಅವರು ರ‍್ಯಾಲಿ ದಿನದಂದು ಸಂಚರಿಸಿದ ಬಸ್‌ನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿದ್ದರು.
ನಟ ವಿಜಯ್ ಅವರು ಮತ್ತೆ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಂತೆಯೇ ಈ ಬೆಳವಣಿಗೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.