ADVERTISEMENT

ಕರೂರು ಕಾಲ್ತುಳಿತ: ಸಿಬಿಐನಿಂದ ವಿಜಯ್‌ ಎರಡನೇ ಸುತ್ತಿನ ವಿಚಾರಣೆ

ಪಿಟಿಐ
Published 19 ಜನವರಿ 2026, 7:48 IST
Last Updated 19 ಜನವರಿ 2026, 7:48 IST
ವಿಜಯ್‌
ವಿಜಯ್‌   

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸೋಮವಾರ ಇಲ್ಲಿನ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು.

ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.