ಚೆನ್ನೈ: ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಂಗ ನಿಂದನೆ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಕೀಯ ಕಾರ್ಯಕರ್ತ ಹಾಗೂ ವಕೀಲ ಆರ್. ವರದರಾಜನ್ ಎನ್ನುವವರನ್ನು ಸೈಬರ್ ಕ್ರೈಂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದರಾಜನ್ ಅವರು ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದು, ನೇತಾಜಿ ಮಕ್ಕಳ್ ಕಚ್ಚಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ.
ಕರೂರು ಕಾಲ್ತುಳಿತ ಪ್ರಕರಣದ ಕುರಿತು ನ್ಯಾಯಾಂಗ ನಿಂದನೆ ಮಾಡಿದ ಆರೋಪದ ಮೇಲೆ ತಮಿಳಿನ ಪ್ರಸಿದ್ಧ ಯ್ಯೂಟ್ಯೂಬರ್ ಮಾರಿದಾಸ್ ಅವರನ್ನು ಅ.4ರಂದು ಬಂಧಿಸಲಾಗಿತ್ತು.
ಸೆ.27ರಂದು ನಟ ಮತ್ತು ರಾಜಕಾರಣಿ ವಿಜಯ್ ಅವರ ಕರೂರು ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 41 ಜನರು ಮೃತಪಟ್ಟಿದ್ದರು. 60ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.