ADVERTISEMENT

Karur stampede:ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2025, 10:28 IST
Last Updated 28 ಸೆಪ್ಟೆಂಬರ್ 2025, 10:28 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ನವದೆಹಲಿ: ಶನಿವಾರ ತಮಿಳುನಾಡಿನ ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಮಂದಿಯ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಗಾಯಾಳುಗಳಿಗೆ ತಲಾ ₹50 ಸಾವಿರ ನೀಡುವುದಾಗಿಯೂ ಹೇಳಿದ್ದಾರೆ.

'ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್‍ಯಾಲಿಯಲ್ಲಿ ಸಂಭವಿಸಿದ ದುರದೃಷ್ಟಕರ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೂ ಪಿಎಂಎನ್‌ಆರ್‌ಎಫ್‌ನಿಂದ ₹2 ಲಕ್ಷ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ₹50,000 ನೀಡಲಾಗುವುದು’ಎಂದು ಎಕ್ಸ್ ಪೋಸ್ಟ್ ಹಂಚಿಕೊಂಡ ಪಿಎಂಒ ತಿಳಿಸಿದೆ.

ಶನಿವಾರ, ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಮಂದಿ ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಮೃತಪಟ್ಟವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದರು. ಘಟನೆಯಲ್ಲಿ ಗಾಯಗೊಂಡ ಜನರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರು ಹಾರೈಸಿದ್ದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹1 ಲಕ್ಷ ಸಹಾಯಧನವನ್ನು ಘೋಷಿಸಿದ್ದರು. ಘಟನೆಯ ಬಗ್ಗೆ ತನಿಖೆಗೆ ಸಿಎಂ ಸ್ಟಾಲಿನ್ ಆದೇಶಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಟಿವಿಕೆ ಪಕ್ಷದ ಅಧ್ಯಕ್ಷ ನಟ ವಿಜಯ್ ತಮ್ಮ ರ್‍ಯಾಲಿ ವೇಳೆ ಮೃತಪಟ್ಟವರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ ₹2 ಲಕ್ಷ ನೀಡುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.