ADVERTISEMENT

ಕರೂರು ಕಾಲ್ತುಳಿತ: ಎಸ್‌ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್‌ಗೆ

ಪಿಟಿಐ
Published 8 ಅಕ್ಟೋಬರ್ 2025, 9:37 IST
Last Updated 8 ಅಕ್ಟೋಬರ್ 2025, 9:37 IST
<div class="paragraphs"><p>ವಿಜಯ್</p></div>

ವಿಜಯ್

   

(ಪಿಟಿಐ ಚಿತ್ರ)

ನವದೆಹಲಿ: ಕರೂರು ಕಾಲ್ತುಳಿತದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಅರ್ಜಿಯ ಪರಿಶೀಲನೆ ನಡೆಸಿತು. ಅಲ್ಲದೆ ಅರ್ಜಿಯ ವಿಚಾರಣೆ ಶುಕ್ರವಾರ (ಅ.10) ಪರಿಗಣಿಸಲು ಸಮ್ಮತಿ ಸೂಚಿಸಿದೆ.

ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಯಬೇಕೆಂದು ಟಿವಿಕೆ ಪಕ್ಷ ಕೋರಿದೆ.

ಟಿವಿಕೆ ಪಕ್ಷದ ಅಧ್ಯಕ್ಷ ನಟ, ರಾಜಕಾರಣಿ ವಿಜಯ್ ಸೆಪ್ಟೆಂಬರ್ 27ರಂದು ನಡೆಸಿದ್ದ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇದರೊಂದಿಗೆ ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 10ರಂದು ವಿಚಾರಣೆ ನಡೆಸಲು ಮಂಗಳವಾರ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿತ್ತು.

ಪ್ರಕರಣದಲ್ಲಿ ಸಿಬಿಐ ತನಿಖೆಗೆ ಮದ್ರಾಸ್ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿಯ ಉಮಾ ಆನಂದನ್ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.