ADVERTISEMENT

ಕರೂರು ಕಾಲ್ತುಳಿತ | ಮೃತರ ಸಂಖ್ಯೆ 39ಕ್ಕೆ ಏರಿಕೆ; 35 ಮೃತದೇಹಗಳ ಗುರುತು ಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2025, 3:06 IST
Last Updated 28 ಸೆಪ್ಟೆಂಬರ್ 2025, 3:06 IST
   

ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್‌ ‌ರ್‍ಯಾಲಿ ಆಯೋಜಿಸಿದ್ದರು. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ (ಪ್ರಭಾರ) ಆರ್ ವೆಂಕಟರಾಮನ್, ‘ಘಟನೆಯಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 35 ಮೃತದೇಹಗಳನ್ನು ಗುರುತಿಸಲಾಗಿದ್ದು, ನಾಲ್ಕು ಮೃತದೇಹಗಳ ಗುರುತು ಪತ್ತೆಯಾಗಿಲ್ಲ’ ಎಂದು ಹೇಳಿದ್ದಾರೆ.

ADVERTISEMENT

ಘಟನೆಯಲ್ಲಿ ಸುಮಾರು 111 ಮಂದಿ ಗಾಯಗೊಂಡಿದ್ದು, ಕರೂರು ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.