ADVERTISEMENT

ಕಾಶ್ಮೀರ: 11 ಮಂದಿ ಹತ್ಯೆ ಪ್ರಕರಣ– ಎನ್‌ಐಎ ತನಿಖೆ?

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 18:34 IST
Last Updated 19 ಅಕ್ಟೋಬರ್ 2021, 18:34 IST

ಶ್ರೀನಗರ (ಪಿಟಿಐ): ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಭಯೋತ್ಪಾದಕರು ಇತ್ತೀಚೆಗೆ ಹತ್ಯೆ ಮಾಡಿದ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಮಾಡುವ ಸಾಧ್ಯತೆ ಇದೆ.

ಈ ತಿಂಗಳು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಶಿಕ್ಷಕರು ಮತ್ತು ಔಷಧಿ ಅಂಗಡಿಯ ಮಾಲೀಕರೊಬ್ಬರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ 11 ನಾಗರಿಕರ ಹತ್ಯೆಗೆ ಸಂಬಂಧಿಸಿದ ಪ್ರಕರಣಗಳನ್ನು ಎನ್ಐಎ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT