ಒಮರ್ ಅಬ್ದುಲ್ಲಾ
– ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾನುವಾರ ಸೂಚನೆ ನೀಡಿದ್ದಾರೆ.
ಆಗಸ್ಟ್ 27ರವರೆಗೂ ಭಾರಿ ಮಳೆಯಾಗಲಿದ್ದು, ಮೇಘ ಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ. ಜನರು ಎಚ್ಚರಿಕೆಯಿಂದ ಇರಬೇಕೆಂದು ಒಮರ್ ಮನವಿ ಮಾಡಿದ್ದಾರೆ.
ಭಾರಿ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಳೆ ಆರ್ಭಟ ಮುಂದುವರಿದಿರುವುದರಿಂದ ಎಲ್ಲಾ ಇಲಾಖೆಗಳಿಗೆ ಕಟ್ಟೆಚ್ಚರ ವಹಿಸುವಂತೆ ಒಮರ್ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿ ಕಚೇರಿ ಸ್ಥಳೀಯ ಆಡಳಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಪ್ರವಾಹಪೀಡಿತ ಪ್ರದೇಶಗಳಲ್ಲಿ ಅಗತ್ಯ ಸೇವೆಗಳ ಪುನಃಸ್ಥಾಪನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಒಮರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಹುತೇಕ ಭಾಗಗಳಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಸೇತುವೆಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.