ಶ್ರೀನಗರ: ದೇಶದ ಭದ್ರತೆ ಮತ್ತು ಐಕ್ಯತೆಗೆ ಧಕ್ಕೆ ತರುವ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪತ್ರಕರ್ತನೊಬ್ಬನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಸಜಾದ್ ಅಹ್ಮದ್ ದಾರ್ ಬಂಧಿತ ಆರೋಪಿ. ಆನ್‌ಲೈನ್ ಪೋರ್ಟಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಎರಡು ದಿನಗಳ ಹಿಂದೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
’ಆರೋಪಿಯು ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದ. ನಕಲಿ ವಿಡಿಯೋ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವ ಮೂಲಕ ಸಾರ್ವಜನಿಕರನ್ನು ಅಧಿಕಾರಿಗಳು, ಭದ್ರತಾ ಪಡೆಗಳು ಹಾಗೂ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.