ಶ್ರೀನಗರದ ರೈನಾವಾರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಲೆಯಾದ ಉಗ್ರರಲ್ಲಿ ಒಬ್ಬನನ್ನು ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಅನಂತನಾಗ್ ಮೂಲದ ಆನ್‌ಲೈನ್ ನ್ಯೂಸ್ ಪೋರ್ಟಲ್ ‘ವ್ಯಾಲಿ ನ್ಯೂಸ್ ಸರ್ವಿಸ್’ನಲ್ಲಿ ಪ್ರಧಾನ ಸಂಪಾದಕನಾಗಿರಯೀಸ್ ಭಟ್ ಕಾರ್ಯನಿರ್ವಹಿಸುತ್ತಿದ್ದನು. ಕಳೆದ ವರ್ಷ ಆಗಸ್ಟ್‌ನಲ್ಲಿ ಲಷ್ಕರ್-ಎ-ತೈಯ್ಬಾ ಸಂಘಟನೆಗೆ ಸೇರ್ಪಡೆಯಾಗಿದ್ದನೆಂದು ಪೊಲೀಸರು ಹೇಳಿದ್ದಾರೆ.
ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಭಟ್ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಮಾಜಿ ಪತ್ರಕರ್ತರೊಬ್ಬ ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಮಾಧ್ಯಮಗಳ ದುರುಪಯೋಗವನ್ನು ಸೂಚಿಸುತ್ತದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಎನ್‌ಕೌಂಟರ್‌ನಲ್ಲಿ ಹತನಾದ ಮತ್ತೊಬ್ಬ ಭಯೋತ್ಪಾದಕನನ್ನು ಬಿಜ್‌ಬೆಹರಾ ನಿವಾಸಿ ಹಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.