ADVERTISEMENT

ಕಾಲಿಗೆ ಗುಂಡು ತಗುಲಿದರೂ ಉಗ್ರರನ್ನು ಮಟ್ಟ ಹಾಕಲು ನೆರವಾದ ಸೇನಾ ಶ್ವಾನ 'ಟೈಸನ್'

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2026, 12:38 IST
Last Updated 23 ಫೆಬ್ರುವರಿ 2026, 12:38 IST
<div class="paragraphs"><p>ಸೇನಾ ಶ್ವಾನ 'ಟೈಸನ್'</p></div>

ಸೇನಾ ಶ್ವಾನ 'ಟೈಸನ್'

   

(ಎಕ್ಸ್ ಚಿತ್ರ)

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾಡ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಸೇನೆಯ ಶ್ವಾನ 'ಟೈಸನ್'. ಕಾಲಿಗೆ ಗುಂಡು ತಗುಲಿದರೂ ಪಾಕ್ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಧೈರ್ಯವಂತ ಸೇನಾ ಶ್ವಾನವು ನೆರವಾಗಿದೆ.

ADVERTISEMENT

ಛಾಟ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಕಮಾಂಡರ್ ಸೈಫುಲ್ಲಾ ಸೇರಿ ಮೂವರು ಉಗ್ರರು ಹತರಾಗಿದ್ದರು.

ಗುಪ್ತಚರ ಮಾಹಿತಿ ಆಧರಿಸಿ ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ಅರೆ ಸೇನಾ ಪಡೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಸೇನೆಯ ಶ್ವಾನ ಟೈಸನ್ ಈ ಶೋಧ ಕಾರ್ಯಾಚರಣೆಯ ಮುಂಚೂಣಿಯಲ್ಲಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಸೇನೆಯ 2 ಪ್ಯಾರಾ (ವಿಶೇಷ ಪಡೆ)ಯಲ್ಲಿದ್ದ ಜರ್ಮನ್ ಶೆಫರ್ಡ್ ತಳಿಯ ಟೈಸನ್, ಉಗ್ರರ ಅಡಗುತಾಣವನ್ನು ನಿಖರವಾಗಿ ಪತ್ತೆ ಹಚ್ಚುವಲ್ಲಿ ನೆರವಾಗಿತ್ತು.

ಎನ್‌ಕೌಂಟರ್ ನಡೆದ ಸ್ಥಳದಿಂದ ಎರಡು ಎಕೆ47 ರೈಫಲ್, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.