ADVERTISEMENT

ಶ್ರೀನಗರ: ರಾಜಕೀಯಕ್ಕೆ ಫೈಸಲ್‌?

ಪಿಟಿಐ
Published 11 ಜನವರಿ 2019, 19:38 IST
Last Updated 11 ಜನವರಿ 2019, 19:38 IST

ಶ್ರೀನಗರ: ಕಾಶ್ಮೀರದ ಸಮಸ್ಯೆಗೆ ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಮತ್ತು ದೇಶದಲ್ಲಿನ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಐಎಎಸ್‌ ಅಧಿಕಾರಿ ಶಾ ಫೈಸಲ್‌, ಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಸದ್ಯಕ್ಕೆ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರಾದರೂ, ಅವರು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT