ಹೈದರಾಬಾದ್: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದಡಿ ತೆಲಂಗಾಣದ ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಸೋಮವಾರ ಅಮಾನತು ಮಾಡಿದ್ದರು.
‘ಕವಿತಾ ಅವರ ಇತ್ತೀಚೆಗೆ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಇರಿಸುಮುರಿಸು ಉಂಟು ಮಾಡಿದ್ದವು. ಇದರಿಂದಾಗಿ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ.ರವೀಂದರ್ ರಾವ್ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿತರಾಗಿದ್ದ ಕವಿತಾ ಅವರು ಸದ್ಯ ಸುಪ್ರೀಂ ಕೋರ್ಟ್ ಮಂಜೂರು ಮಾಡಿದ ಜಾಮೀನಿನ ಮೇಲೆ ಹೊರಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.