ADVERTISEMENT

ಎಸ್‌ಟಿ ಮೀಸಲಾತಿ ಶೇ10ಕ್ಕೆ ಹೆಚ್ಚಿಸಿದ ಕೆಸಿಆರ್‌

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 15:47 IST
Last Updated 2 ಅಕ್ಟೋಬರ್ 2022, 15:47 IST
ಕೆ. ಚಂದ್ರಶೇಖರ ರಾವ್‌
ಕೆ. ಚಂದ್ರಶೇಖರ ರಾವ್‌   

ಹೈದರಾಬಾದ್‌: ಸರ್ಕಾರಿ ಶಿಕ್ಷಣ ಸಂಸ್ಥೆ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದವರಿಗೆ (ಎಸ್‌ಟಿ) ನೀಡುತ್ತಿದ್ದ ಮೀಸಲಾತಿಯನ್ನು ಶೇ6 ರಿಂದ ಶೇ 10ಕ್ಕೆ ಏರಿಸಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ (ಕೆಸಿಆರ್‌)ಆದೇಶ ಹೊರಡಿಸಿದ್ದಾರೆ.

ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಮಸೂದೆಗೆ ತೆಲಂಗಾಣ ವಿಧಾನ ಸಭೆಯಲ್ಲಿ 2017ರಲ್ಲಿ ಅವಿರೋಧವಾಗಿ ಅನುಮೋದನೆ ನೀಡಲಾಗಿತ್ತು. ಬಳಿಕ ಅದನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಇದಕ್ಕೆ ಒಪ್ಪಿಗೆ ಪಡೆಯಲು ತೆಲಂಗಾಣ ಸರ್ಕಾರವು ಹಲವು ಬಾರಿ ನಿಯೋಗಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಆದರೆ ಒಪ್ಪಿಗೆ ಸಿಕ್ಕಿಲ್ಲ.ಈ ಕಾರಣಕ್ಕೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT