ADVERTISEMENT

2024ಕ್ಕೆ ಕೇಂದ್ರದಲ್ಲಿ ಕೆಸಿಆರ್ ಸರ್ಕಾರ: ಐಟಿ ದಾಳಿಯಿಂದ ಮುಕ್ತಿ: ತೆಲಂಗಾಣ ಸಚಿವ

ತೆಲಂಗಾಣ ಸಚಿವ ಮಲ್ಲಾರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 14:24 IST
Last Updated 27 ನವೆಂಬರ್ 2022, 14:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್‌ : 2024ರ ಸಾರ್ವತ್ರಿಕ ಚುನಾವಣೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಕೇಂದ್ರದಲ್ಲಿ ಸರ್ಕಾರ ರಚಿಸಲಿದ್ದಾರೆ. ಆಗ ಆದಾಯ ತೆರಿಗೆ (ಐಟಿ) ದಾಳಿಗಳು ಇರುವುದಿಲ್ಲ ಎಂದು ತೆಲಂಗಾಣ ಕಾರ್ಮಿಕ ಸಚಿವ ಸಿ. ಮಲ್ಲಾರೆಡ್ಡಿ ಭಾನುವಾರ ಹೇಳಿದ್ದಾರೆ.

ಸಿದ್ದಿಪೇಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಕೆಸಿಆರ್ ಸರ್ಕಾರ ಬಂದ ಮೇಲೆ ದೇಶದಾದ್ಯಂತ ಆದಾಯ ತೆರಿಗೆ ಸಡಿಲವಾಗಲಿದ್ದು, ಯಾವುದೇ ದಾಳಿಗಳು ನಡೆಯುವುದಿಲ್ಲ. ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸಂಪಾದಿಸಬಹುದು. ಕೆಸಿಆರ್‌ ಅವರು ಜನರು ಸ್ವಯಂ ಪ್ರೇರಿತರಾಗಿ ತೆರಿಗೆ ಪಾವತಿಸುವ ನಿಯಮ ತರುತ್ತಾರೆ. ದೇಶದಲ್ಲಿ ಬದಲಾವಣೆ ಆಗಬೇಕು ಎಂದಿದ್ದಾರೆ.

ಇತ್ತೀಚೆಗಷ್ಟೇ ಐಟಿ ಅಧಿಕಾರಿಗಳು ಮಲ್ಲಾರೆಡ್ಡಿ ಮತ್ತು ಅವರ ಕುಟುಂಬದ ಸದಸ್ಯರ ಮನೆ ಹಾಗೂ ಶಿಕ್ಷಣ ಸಂಸ್ಥೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಐಟಿ ಅಧಿಕಾರಿಗಳ ಜೊತೆ ಇದ್ದ ಸಿಆರ್‌ಪಿಎಫ್‌ ಸಿಬ್ಬಂದಿ ತಮ್ಮ ಮಗನಿಗೆ ಥಳಿಸಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಶೋಧದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಮೇಲೆ ಮಲ್ಲಾ ರೆಡ್ಡಿ ವಿರುದ್ಧ ನ.24ರಂದು ಪೊಲೀಸರು ದೂರು ದಾಖಲಿಸಿದ್ದಾರೆ. ಅಲ್ಲದೇ ಮಲ್ಲಾರೆಡ್ಡಿಯ ಪುತ್ರನ ದೂರಿನ ಮೇರೆಗೆ ಐಟಿ ಅಧಿಕಾರಿಯ ಮೇಲೂ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.