
ರಾಜ್‌ಘಾಟ್‌ಗೆ ಭೇಟಿ ನೀಡಿದ ಬಳಿಕ ಹನುಮಾನ್ ದೇವಸ್ಥಾನಕ್ಕೆ ತೆರಳುತ್ತಿರುವ ಕೇಜ್ರಿವಾಲ್ ಹಾಗೂ ಎಎಪಿ ನಾಯಕರು.
(ಪಿಟಿಐ ಚಿತ್ರ)
ನವದೆಹಲಿ: ಜೈಲಿಗೆ ಶರಣಾಗುವ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ ಘಾಟ್‌ಗೆ ಭೇಟಿ ನೀಡಿ, ಬಳಿಕ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದಿಂದ ರೋಸ್ ಅವೆನ್ಯೂ ರಸ್ತೆಯಲ್ಲಿರುವ ಆಮ್ ಆದ್ಮಿ ಪಕ್ಷದ ಕಚೇರಿಗೆ ತೆರಳಿರುವ ಕೇಜ್ರಿವಾಲ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೇಜ್ರಿವಾಲ್ ಅವರಿಗೆ ಪತ್ನಿ ಸುನೀತಾ ಕೇಜ್ರಿವಾಲ್, ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದರಾದ ಸಂಜಯ್ ಸಿಂಗ್ ಮತ್ತು ಸಂದೀಪ್ ಪಾಠಕ್ ಸೇರಿದಂತೆ ಪಕ್ಷದ ನಾಯಕರಾದ ದುರ್ಗೇಶ್ ಪಾಠಕ್, ರಾಖಿ ಬಿರ್ಲಾ ಮತ್ತು ರೀನಾ ಗುಪ್ತಾ ಸಾಥ್ ನೀಡಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಮಾರ್ಚ್ ತಿಂಗಳಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜೂನ್ 1ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಅವರು ಇಂದು (ಜೂನ್ 2) ಶರಣಾಗಬೇಕಿದೆ.
21 ದಿನಗಳ ಕಾಲ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್‌ಗೆ ಕೇಜ್ರಿವಾಲ್ ಧನ್ಯವಾದ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ನಾನು ತಿಹಾರ್‌ಗೆ ಹೋಗಿ ಶರಣಾಗುತ್ತೇನೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.