ADVERTISEMENT

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ ಕೇಜ್ರಿವಾಲ್

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 7:08 IST
Last Updated 16 ಫೆಬ್ರುವರಿ 2020, 7:08 IST
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ ಕೇಜ್ರಿವಾಲ್   

ನವದೆಹಲಿ: ಆಮ್ ಆದ್ಮಿ ಪಕ್ಷದ (ಆಪ್) ನಾಯಕ ಅರವಿಂದ ಕೇಜ್ರಿವಾಲ್ ಭಾನುವಾರ ದೆಹಲಿ ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಗರದ ರಾಮ್‌ಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು. ಕೇಜ್ರಿವಾಲ್ ಸಂಪುಟದ ಸದಸ್ಯರಾಗಿರುವ ಆರು ಮಂದಿಯೂ ಇದೇ ಸಂದರ್ಭ ಪ್ರಮಾಣ ವಚನ ಸ್ವೀಕರಿಸಿದರು.

ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ, ಸಚಿವರಾಗಿದ್ದ ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಗೌತಮ್ ಅವರು ಈ ಬಾರಿಯೂ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದಿದ್ದಾರೆ.

ADVERTISEMENT

ದೆಹಲಿ ವಿಧಾನಸಭೆಯ 70 ಸ್ಥಾನಗಳ ಪೈಕಿ 62 ಸ್ಥಾನಗಳಲ್ಲಿ ಆಪ್ ಜಯಗಳಿಸಿತ್ತು. ಘಟಾನುಘಟಿಗಳ ಪ್ರಚಾರದ ನಡುವೆಯೂ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಕಾಂಗ್ರೆಸ್‌ ಶೂನ್ಯಸಂಪಾದಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.