
ಪ್ರಜಾವಾಣಿ ವಾರ್ತೆ
ನವದೆಹಲಿ: ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
‘ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್, ಜೈ ಬಜರಂಗ ಬಲಿ’ ಎಂದು ಅವರು ಬುಧವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.