ADVERTISEMENT

ಸ್ವತಂತ್ರ ವೀಕ್ಷಕರ ನೇಮಕಕ್ಕೆ ಆಗ್ರಹ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ

ಪಿಟಿಐ
Published 2 ಫೆಬ್ರುವರಿ 2025, 6:08 IST
Last Updated 2 ಫೆಬ್ರುವರಿ 2025, 6:08 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

ಪಿಟಿಐ ಚಿತ್ರ

ನವದೆಹಲಿ: ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಚುನಾವಣಾ ಆಯೋಗ ನವದೆಹಲಿ ಕ್ಷೇತ್ರದಲ್ಲಿ ಸ್ವತಂತ್ರ ವೀಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್, ಇಂತಹ ಘಟನೆಗಳಲ್ಲಿ ಭಾಗಿಯಾಗಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಜ್ರಿವಾಲ್ ಅವರ ಆರೋಪಗಳ ಬಗ್ಗೆ ಬಿಜೆಪಿ ಹಾಗೂ ದೆಹಲಿ ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಬಗ್ಗೆ ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶನಿವಾರ ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಭಾಗಿಯಾಗಿದ್ದ ರಿಥಾಲಾ ವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಮೊಹಿಂದರ್ ಗೋಯಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿ ಕಾರ್ಯಕರ್ತರು ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ನವದೆಹಲಿ ಕ್ಷೇತ್ರದಲ್ಲಿ ಪ್ರಚಾರ ಮಾಡದಂತೆ ತಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.