ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಾಗೂ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಗಳಲ್ಲಿ ನಡೆದ ಹಿಂಸಾಚಾರವು ಪ್ರಮುಖ ಅಂಶವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಭಾನುವಾರ ಹೇಳಿದ್ದಾರೆ.
ಈ ಎಲ್ಲ ಘಟನೆಗಳ ಕುರಿತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಲಘುವಾಗಿ ನೀಡಿರುವ ಪ್ರತಿಕ್ರಿಯೆಯು ಅವರ ಅವಕಾಶವಾದಿತನವನ್ನು ತೋರ್ಪಡಿಸುತ್ತದೆ ಎಂದು ಹೇಳಿರುವ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.