ADVERTISEMENT

ಕೇರಳ: ಐಸಿಯು ಕಿಟಕಿಯಿಂದ ಹಾರಿ ಪರಾರಿಯಾದ ಆರೋಪಿ

ಪಿಟಿಐ
Published 10 ನವೆಂಬರ್ 2025, 6:40 IST
Last Updated 10 ನವೆಂಬರ್ 2025, 6:40 IST
<div class="paragraphs"><p>ಸಾಂದರ್ಭಿಕ-ಚಿತ್ರ</p></div>

ಸಾಂದರ್ಭಿಕ-ಚಿತ್ರ

   

– ಎ.ಐ ಚಿತ್ರ

ತಿರುವನಂತಪುರ: ಪೊಲೀಸ್ ವಶದದಲ್ಲಿದ್ದ ಹಣಕಾಸು ವಂಚನೆ ಪ್ರಕರಣದ ಆರೋಪಿಯೊಬ್ಬ ಆಸ್ಪತ್ರೆಯ ತುರ್ತು ನಿಗಾ ಘಟಕದ ಕಿಟಕಿ ಹಾರಿ ಪರಾರಿಯಾದ ಘಟನೆ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ನಡೆದಿದೆ.

ADVERTISEMENT

ಸೋಮವಾರ ಬೆಳಿಗ್ಗೆ ಘಟನೆ ನಡೆದಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.

ಕೊಲ್ಲಂ ಪೂರ್ವ ಪೊಲೀಸರ ಕಸ್ಟಡಿಯಲ್ಲಿದ್ದ ರಾಜೀವ್ ಎಂಬಾತನೇ ಪರಾರಿಯಾಗಿರುವ ವ್ಯಕ್ತಿ.

ಭಾನುವಾರ ರಾತ್ರಿ ಸುಸ್ತು ಹಾಗೂ ಎದೆನೋವು ಕಾಣಿಸಿಕೊಂಡಿದ್ದರಿಂದ ಆತನನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಐಸಿಯು ಕೊಠಡಿಯ ಕಿಟಕಿಯಿಂದ ಹಾರಿ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಬಲೆ ಬೀಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.