ADVERTISEMENT

ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಏಜೆನ್ಸೀಸ್
Published 6 ಸೆಪ್ಟೆಂಬರ್ 2020, 12:57 IST
Last Updated 6 ಸೆಪ್ಟೆಂಬರ್ 2020, 12:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೇರಳದ ಹಲವೆಡೆ ಭಾನುವಾರ ಭಾರಿ ಮಳೆಯಾಗಿದ್ದು, ಮುಂದಿನ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸೆಪ್ಟೆಂಬರ್ 7 ಮತ್ತು 8 ರಂದು ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಮತ್ತೊಂದು ಅಧಿಸೂಚನೆಯಲ್ಲಿ, ಸೆಪ್ಟೆಂಬರ್ 8ರವರೆಗೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

'ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 4 ರಿಂದ ಸೆಪ್ಟೆಂಬರ್ 8 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ' ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಶುಕ್ರವಾರ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಭಾನುವಾರ ಮಿಂಚು ಸಹಿತ ಮಳೆಯಾಗಲಿರುವುದಾಗಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.