ADVERTISEMENT

ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಬಿಜೆಪಿಗೆ ಅಧಿಕೃತ ಸೇರ್ಪಡೆ

ಪಿಟಿಐ
Published 26 ಫೆಬ್ರುವರಿ 2021, 6:06 IST
Last Updated 26 ಫೆಬ್ರುವರಿ 2021, 6:06 IST
ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡರು – ಪಿಟಿಐ ಚಿತ್ರ
ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡರು – ಪಿಟಿಐ ಚಿತ್ರ   

ಮಲಪ್ಪುರಂ: ಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ವಿಜಯ ಯಾತ್ರೆ’ಯು ಮಲಪ್ಪುರಂನ ಚಂಗರಮಕುಳಂ ತಲುಪಿದ ವೇಳೆ, ಗುರುವಾರ ರಾತ್ರಿ ಶ್ರೀಧರನ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ನಾಯಕರು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಶ್ರೀಧರನ್ ಅವರನ್ನು ಸುರೇಂದ್ರನ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಳಿಕ ಮಾತನಾಡಿದ ಶ್ರೀಧರನ್, ಇದು ಬದುಕಿನಲ್ಲಿ ಅತ್ಯಂತ ಮಹತ್ವದ ಕ್ಷಣ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬಿಜೆಪಿ ಸೇರುವುದಾಗಿ ಶ್ರೀಧರನ್ ಇತ್ತೀಚೆಗೆ ಘೋಷಿಸಿದ್ದರು. ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ಅವರು ಹೇಳಿದ್ದರು. ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.