ADVERTISEMENT

ಕೇರಳ: ಈಜಲು ಸಮುದ್ರಕ್ಕೆ ಇಳಿದಿದ್ದ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವು

ಪಿಟಿಐ
Published 2 ನವೆಂಬರ್ 2025, 15:31 IST
Last Updated 2 ನವೆಂಬರ್ 2025, 15:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯಾಂಬಲದಲ್ಲಿ ಈಜಲು ಕಡಲಿಗೆ ಇಳಿದಿದ್ದ ಬೆಂಗಳೂರಿನ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬೆಂಗಳೂರಿನ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಗಳಾದ ಅಫ್ನಾನ್‌, ರಹನುದ್ದೀನ್‌ ಮತ್ತು ಅಫ್ರಾಸ್‌ ಎಂದು ಗುರುತಿಸಲಾಗಿದೆ.

‘ಪ್ರವಾಸಕ್ಕೆಂದು ಬಂದಿದ್ದ ಎಂಟು ಮಂದಿ ವಿದ್ಯಾರ್ಥಿಗಳು ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈಜಲು ಸಮುದ್ರಕ್ಕೆ ಇಳಿದಿದ್ದರು. ಮೂವರು ಭಾರಿ ಗಾತ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋದರು. ಕೂಡಲೇ ಅವರನ್ನು ಹೊರತಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಅವರು ಬದುಕಿ ಉಳಿಯಲಿಲ್ಲ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.