ADVERTISEMENT

ದ್ವೇಷ ಭಾಷಣ: ಕೇರಳದ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲು

ಪಿಟಿಐ
Published 11 ಜನವರಿ 2025, 9:37 IST
Last Updated 11 ಜನವರಿ 2025, 9:37 IST
<div class="paragraphs"><p>ಪಿ.ಸಿ. ಜಾರ್ಜ್</p></div>

ಪಿ.ಸಿ. ಜಾರ್ಜ್

   

Credit: Facebook/pcgeorgeofficial

ಕೊಟ್ಟಾಯಂ: ಧಾರ್ಮಿಕ ದ್ವೇಷವನ್ನು ಕೆರಳಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಇತ್ತೀಚೆಗೆ ಖಾಸಗಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾರ್ಜ್ ಅವರು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಮುಸ್ಲಿಂ ಯೂತ್ ಲೀಗ್ ಮುನ್ಸಿಪಲ್ ಸಮಿತಿ ನೀಡಿದ ದೂರಿನ ಆಧಾರದ ಮೇಲೆ ಕೊಟ್ಟಾಯಂನ ಎರಟ್ಟುಪೇಟೆ ಪೊಲೀಸರು ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜಾರ್ಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾರ್ಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿರುವ ಕೇರಳದ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್, ‘ಇದು ಎಲ್‌ಡಿಎಫ್‌ ಸರ್ಕಾರದ ರಾಜಕೀಯ ಸೇಡಿನ ಕ್ರಮವಾಗಿದೆ’ ಎಂದು 'ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.