ADVERTISEMENT

ಕೇರಳ| ಎಸ್‌ಐಆರ್‌: ಬಿಎಲ್ಒಗಳ ಬಹಿಷ್ಕಾರ

ಪಿಟಿಐ
Published 16 ನವೆಂಬರ್ 2025, 15:57 IST
Last Updated 16 ನವೆಂಬರ್ 2025, 15:57 IST
   

ತಿರುವನಂತಪುರ: ಬೂತ್‌ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸೋಮವಾರ ಕೇರಳದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.

ಕಣ್ಣೂರಿನಲ್ಲಿ ಬಿಎಲ್‌ಒವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಳಿಕ ರಾಜ್ಯ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಕ್ರಿಯಾ ಮಂಡಳಿ, ಶಿಕ್ಷಕರ ಸಂಘಗಳ ಒಕ್ಕೂಟ, ಕೇರಳ ಎನ್‌ಜಿಗಳ ಒಕ್ಕೂಟವು ಜಂಟಿಯಾಗಿ ಬಹಿಷ್ಕಾರ ಕುರಿತಾಗಿ ಪ್ರಕಟಣೆಯನ್ನು ಬಿಡುಗಡೆಗೊಳಿಸಿದೆ. 

ಮಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಿಂದ(ಎಸ್ಐಆರ್) ಬೂತ್‌ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮೇಲೆ ವಿಪರೀತ ಒತ್ತಡ ಉಂಟಾಗುತ್ತಿದೆ. ಹೀಗಾಗಿ, ಬಹಿಷ್ಕಾರ ಹಾಕುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಈ ಸಂಘಟನೆಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.