ADVERTISEMENT

Kerala SIR| BLO ಆತ್ಮಹತ್ಯೆ ಪ್ರಕರಣ; ಬಿಎಲ್‌ಒಗಳಿಂದ ಕೆಲಸ ಬಹಿಷ್ಕಾರ,ಪ್ರತಿಭಟನೆ

ಪಿಟಿಐ
Published 17 ನವೆಂಬರ್ 2025, 10:24 IST
Last Updated 17 ನವೆಂಬರ್ 2025, 10:24 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಬೂತ್‌ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್‌ಒ) ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು (ಸೋಮವಾರ) ರಾಜ್ಯದಾದ್ಯಂತ ಬಿಎಲ್ಒ ಅಧಿಕಾರಿಗಳು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟಿಸಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಎಸ್‌ಐಆರ್ ಮೇಲೆ ಪರಿಣಾಮ ಬೀರಿದೆ.

ADVERTISEMENT

ಕಣ್ಣೂರು ಜಿಲ್ಲೆಯ ಪಯ್ಯಣ್ಣೂರು ಮೂಲದ 44 ವರ್ಷದ ಅನೀಶ್ ಜಾರ್ಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಎಸ್‌ಐಆರ್‌ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಇಂದು ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಚುನಾವಣಾಧಿಕಾರಿ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಿದವು. ಬಿಎಲ್‌ಒಗಳ ಮೇಲೆ ಅಧಿಕ ಕೆಲಸದ ಒತ್ತಡವನ್ನು ತಡೆಯಬೇಕು ಮತ್ತು ಎಸ್‌ಐಆರ್ ಮುಂದೂಡುವುದನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.

ಏತನ್ಮಧ್ಯೆ ಜಾರ್ಜ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯ ಸಂಸ್ಕಾರಕ್ಕಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

ಸಿಪಿಐ(ಎಂ) ಪಾತ್ರದ ಬಗ್ಗೆಯೂ ತನಿಖೆಗೆ ಆಗ್ರಹ...

ಈ ಮಧ್ಯೆ ಜಾರ್ಜ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಿಪಿಐ(ಎಂ) ಕಾರ್ಯಕರ್ತರ ಪಾತ್ರವನ್ನು ತನಿಖೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಒತ್ತಾಯಿಸಿದ್ದಾರೆ.

'ಸಾಂಪ್ರದಾಯಿಕ ಕಾಂಗ್ರೆಸ್ ಮತದಾರರನ್ನು ಪಟ್ಟಿಯಿಂದ ಹೊರಗಿರಿಸಲು ಬಿಜೆಪಿ ಹಾಗೂ ಸಿಪಿಐ(ಎಂ) ಯತ್ನಿಸುತ್ತಿವೆ' ಎಂದು ಅವರು ಆರೋಪಿಸಿದ್ದಾರೆ.

'ಎಸ್‌ಐಆರ್ ಹಿಂದೆ ಬಿಜೆಪಿ ದುರುದ್ದೇಶ ಇದೆ. ಅದಕ್ಕೆ ಸಿಪಿಐ(ಎಂ) ಬೆಂಬಲವಿದೆ. ಈ ಪ್ರಕ್ರಿಯೆಯನ್ನು ನಾವು ವಿರೋಧಿಸುತ್ತೇವೆ' ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗವು ಬಿಎಲ್‌ಒಗಳ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.