ಅಪಘಾತ
–ಪ್ರಾತಿನಿಧಿಕ ಚಿತ್ರ
ಕೋಟಯಂ: ಕೇರಳದ ಕೋಟಯಂ ಜಿಲ್ಲೆಯಲ್ಲಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟಿದ್ದು, 49 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ತಡರಾತ್ರಿ ಘಟನೆ ನಡೆದಿದೆ. ಕಣ್ಣೂರು ಜಿಲ್ಲೆಯ ಇರಿಟ್ಟಿಯ ಪೆರವೂರ್ ಮೂಲದ ಸಿಂಧು ಮೃತರು.
ಪೊಲೀಸರ ಪ್ರಕಾರ, ಎಲ್ಲ ಪ್ರಯಾಣಿಕರು ಕಣ್ಣೂರು ಜಿಲ್ಲೆಯವರಾಗಿದ್ದು, ಕನ್ಯಾಕುಮಾರಿ ಹಾಗೂ ತಿರುವಂತರಪುರ ಪ್ರವಾಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದರು.
ಕೋಟಯಂ ಚಿಕ್ಕಲ್ಲಯಿಲ್ ಚರ್ಚ್ ಬಳಿ ಎ.ಸಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು.
ಬಸ್ ಚಾಲಕ ವಿನೋದ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.