ADVERTISEMENT

ಕೇರಳ: ಸಿಎಎ ವಿರುದ್ಧ ಕಾನೂನು ಹೋರಾಟ

ಪಿಟಿಐ
Published 13 ಮಾರ್ಚ್ 2024, 13:52 IST
Last Updated 13 ಮಾರ್ಚ್ 2024, 13:52 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌   

ತಿರುವನಂತಪುರ: ಸಿಎಎ ಕುರಿತು ಕಾನೂನು ಹೋರಾಟ ಕೈಗೊಳ್ಳಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಿಎಎ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇರುವ ಮೂಲ ದಾವೆಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುವ ಜವಾಬ್ದಾರಿಯನ್ನು ಅಡ್ವೊಕೇಟ್‌ ಜನರಲ್‌ಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ. 

ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನದ 131ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮೂಲ ದಾವೆಯನ್ನು ಹೂಡಿದೆ. ಇದೀಗ ಕೇಂದ್ರ ಸರ್ಕಾರ ಸಿಎಎ ನಿಯಮಗಳ ಅಧಿಸೂಚನೆ ಹೊರಡಿಸಿರುವುದರಿಂದ, ರಾಜ್ಯವು ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚುವರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅದು ತಿಳಿಸಿದೆ. 

ADVERTISEMENT

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದಿಲ್ಲ ಎಂದೂ ಈ ಹೇಳಿಕೆಯಲ್ಲಿ ಸರ್ಕಾರ ದೃಢಪಡಿಸಿದೆ. ಸಿಎಎ ವಿರೋಧಿಸಿ ಕೇರಳದ ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ವ್ಯಾಪಕ ಪ್ರತಿಭಟನೆಗಳನ್ನು ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.