ತ್ರಿಶ್ಯೂರ್: ಕೇರಳದ ವಯನಾಡ್‌ನಲ್ಲಿ ಜುಲೈ ತಿಂಗಳಲ್ಲಿ ಸಂಭವಿಸಿದ ಭೂಕುಸಿತ ದುರಂತದ ಸಂತ್ರಸ್ತರ ಪುನರ್‌ವಸತಿಗೆ ಕೇಂದ್ರ ಸರ್ಕಾರವು ಯಾವುದೇ ನೆರವು ನೀಡಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತೊಮ್ಮೆ ಆರೋಪಿಸಿದ್ದಾರೆ.
ಚೇಲಕ್ಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎಲ್‌ಡಿಎಫ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯನ್ ‘ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನೂರಾರು ಮನೆಗಳು ನಾಶವಾದವು. ದುರಂತ ನಡೆದು ಹಲವು ತಿಂಗಳುಗಳಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ನೆರವು ದೊರೆತಿಲ್ಲ. ವಿಧಾನಸಭೆ ಅಂಗೀಕರಿಸಿದ ಸರ್ವಾನುಮತದ ನಿರ್ಣಯ ಸೇರಿದಂತೆ ಹಲವು ಮನವಿಗಳನ್ನು ಕಳುಹಿಸಿದ್ದರೂ ನೆರವು ದೊರೆತಿಲ್ಲ’ ಎಂದರು.
‘ಪ್ರಕೃತಿ ವಿಕೋಪಗಳಿಗೆ ತುತ್ತಾದ ಇತರ ರಾಜ್ಯಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆದರೆ, ಕೇರಳವನ್ನು ಏಕೆ ಕಡೆಗಣಿಸಲಾಗುತ್ತಿದೆ?’ ಎಂದು ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.