ADVERTISEMENT

ವಿಮಾನ ದುರಂತ: ಮೃತರ ಕುಟುಂಬಸ್ಥರಿಗೆ ಕೇರಳ ಸರ್ಕಾರದಿಂದ ₹10 ಲಕ್ಷ ಪರಿಹಾರ

ಏಜೆನ್ಸೀಸ್
Published 8 ಆಗಸ್ಟ್ 2020, 10:47 IST
Last Updated 8 ಆಗಸ್ಟ್ 2020, 10:47 IST
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್    

ಕೋಯಿಕ್ಕೋಡ್‌: ಇಲ್ಲಿ ಶುಕ್ರವಾರ ನಡೆದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದುಬೈಯಿಂದ ಬಂದ ಐಎಕ್ಸ್‌ 1344 ವಿಮಾನವು ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು. ಶುಕ್ರವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಪೈಲಟ್‌ ದೀಪಕ್‌ ಸಾಠೆ ಹಾಗೂ ಸಹ ಪೈಲಟ್‌ ಅಖಿಲೇಶ್‌ ಕುಮಾರ್‌ ಸೇರಿದಂತೆ 18 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.

‘ಘಟನೆಯ ತನಿಖೆ ನಡೆಸಲು ಏರ್‌ಕ್ರಾಫ್ಟ್‌ ಆ್ಯಕ್ಸಿಡೆಂಡ್‌ ಇನ್ವೆಸ್ಟಿಗೇಷನ್‌ ಬ್ಯೂರೊ (ಎಎಐಬಿ) ಮತ್ತು ಡಿಜಿಸಿಎ ಆ್ಯಂಡ್‌ ಫ್ಲೈಟ್‌ ಸೇಫ್ಟಿ ಇಲಾಖೆಯ ಅಧಿಕಾರಿಗಳೂ ನಗರಕ್ಕೆ ಬಂದಿದ್ದಾರೆ’ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಶನಿವಾರ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.