ADVERTISEMENT

ಕೇರಳ: ತಾಪಮಾನದಲ್ಲಿ ಹೆಚ್ಚಳ; ಮೇ 6ರವರೆಗೆ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಸೂಚನೆ

ಪಿಟಿಐ
Published 2 ಮೇ 2024, 16:25 IST
Last Updated 2 ಮೇ 2024, 16:25 IST
.
.   

ತಿರುವನಂತಪುರ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಮೇ 6ರವರೆಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಸೂಚಿಸಿದ್ದಾರೆ.

ಕೇರಳದಲ್ಲಿ ತಾಪಮಾನ ಏರಿಕೆ ಮುಂದುವರಿದಿದ್ದು, ಬಿಸಿ ಗಾಳಿಯಿಂದಾಗುವ ಪರಿಣಾಮಗಳನ್ನು ನಿಯಂತ್ರಿಸುವ ಸಂಬಂಧ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆನ್‌ಲೈನ್‌ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.

‘ಆಲಪ್ಪುಳ, ಪಾಲಕ್ಕಾಡ್, ತ್ರಿಶ್ಶೂರ್‌ ಮತ್ತು ಕೋಯಿಕ್ಕೋಡ್‌ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆಯು ಅಧಿಕ ತಾಪಮಾನದ ಯೆಲ್ಲೋ ಅಲರ್ಟ್ ನೀಡಿದ್ದು,  ಜನರು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಸಂಚರಿಸಬಾರದು’ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.