ADVERTISEMENT

ಇಂದು ಸಿಎಂ ಬಸವರಾಜ ಬೊಮ್ಮಾಯಿ– ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 19:22 IST
Last Updated 17 ಸೆಪ್ಟೆಂಬರ್ 2022, 19:22 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌   

ತಿರುವನಂತ‍ಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ಭೇಟಿಯಾಗಲಿದ್ದಾರೆ.

ತಲಶ್ಶೇರಿ–ಮೈಸೂರು ಹಾಗೂ ನಿಲಂಬೂರು–ನಂಜನಗೂಡು ರೈಲ್ವೆ ಯೋಜನೆಯ ಅನುಷ್ಠಾನದ ಕುರಿತು ಉಭಯ ನಾಯಕರು ಚರ್ಚಿಸುವ ನಿರೀಕ್ಷೆ ಇದೆ. ತಿರುವನಂತಪುರ–ಕಾಸರಗೋಡು ಸೆಮಿ ಹೈ–ಸ್ಪೀಡ್‌ ರೈಲು ಮಾರ್ಗ ಹಾಗೂ ಸಿಲ್ವರ್‌ ಮಾರ್ಗವನ್ನು ಮಂಗಳೂರಿನವರೆಗೂ ವಿಸ್ತರಿಸುವ ಸಂಬಂಧ ಕೇರಳ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದ್ದು, ಈ ಕುರಿತೂ ಚರ್ಚೆ ನಡೆಸುವ ಸಾಧ್ಯತೆ ಇದೆ.

‘ತಿರುವನಂತಪುರದಲ್ಲಿ ಇತ್ತೀಚೆಗೆ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ದಕ್ಷಿಣ ವಲಯದ ಸಮಿತಿ ಸಭೆ ನಡೆಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಿಗದಿಪಡಿಸಲಾಗಿದೆ.ಎರಡು ರೈಲು ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ’ ಎಂದು ಕೇರಳ ಮುಖ್ಯಮಂತ್ರಿಯವರ ಕಾರ್ಯಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.