ADVERTISEMENT

ಕೇರಳ | ಗ್ಯಾಲರಿಯಿಂದ ಕೆಳಗೆ ಬಿದ್ದ ಶಾಸಕಿಯ ಆರೋಗ್ಯದಲ್ಲಿ ಅಲ್ಪ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2024, 6:50 IST
Last Updated 31 ಡಿಸೆಂಬರ್ 2024, 6:50 IST
<div class="paragraphs"><p>ಗ್ಯಾಲರಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೇರಳದ ಶಾಸಕಿ ಉಮಾ ಥಾಮಸ್</p></div>

ಗ್ಯಾಲರಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೇರಳದ ಶಾಸಕಿ ಉಮಾ ಥಾಮಸ್

   

(ಪಿಟಿಐ ಚಿತ್ರ)

ಕೊಚ್ಚಿ: ಕೇರಳದ ಕೊಚ್ಚಿ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದ ವೇಳೆ ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದು ಮಿದುಳು ಮತ್ತು ಬೆನ್ನುಮೂಳೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಅವರ ಆರೋಗ್ಯ ಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ಶಾಸಕಿ ಉಮಾ ಥಾಮಸ್ ವೆಂಟಿಲೇಟರ್ ಸಹಾಯದಲ್ಲೇ ಇದ್ದಾರೆ. ವೈದ್ಯರ ಸಂಜ್ಞೆಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದು, ಕಣ್ಣುಗಳನ್ನು ತೆರೆದಿದ್ದಾರೆ. ಕೈ ಮತ್ತು ಕಾಲುಗಳಲ್ಲಿ ಚಲನೆ ಕಂಡುಬಂದಿದೆ ಎಂದು ಮೆಡಿಕಲ್ ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ.

ಶಾಸಕಿ ತನ್ನ ಮಕ್ಕಳನ್ನು ಗುರುತಿಸಿದ್ದಾರೆ. ಇದು ಚೇತರಿಕೆಯ ಹಂತದಲ್ಲಿ ಗಮನಾರ್ಹ ಹೆಜ್ಜೆಯಾಗಿದೆ ಎಂದು ವೈದ್ಯರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ಶ್ವಾಸಕೋಶದ ಸ್ಥಿತಿ ಗಂಭೀರವಾಗಿ ಮುಂದುವರಿದಿದೆ. ಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಾಗಬಹುದು ಎಂದು ಹೇಳಲಾಗಿದೆ.

ಭಾನುವಾರ (ಡಿ.29) ಕೊಚ್ಚಿಯ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದ ವೇಳೆ ತೃಕ್ಕಾಕರ ಶಾಸಕಿ ಉಮಾ ಥಾಮಸ್, ವಿಐಪಿ ಗ್ಯಾಲರಿಯಿಂದ 15 ಅಡಿ ಕೆಳಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ನೃತ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪ್ರಕರಣ ಸಂಬಂಧ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.