ಕಾಂಗ್ರೆಸ್ ಪಕ್ಷದ ಧ್ವಜ
ತಿರುವನಂತಪುರಂ: ಪಕ್ಷದ ಅಧ್ಯಕ್ಷ ಸ್ಥಾನದಿಂದ ನನ್ನ ಇಳಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಭಾನುವಾರ ತಿಳಿಸಿದ್ದಾರೆ.
ಕೇರಳ ಕಾಂಗ್ರೆಸ್‌ನಲ್ಲಿ ಅಧ್ಯಕ್ಷರು ಸೇರಿ ಮುಖಂಡರ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳಾಗಲಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸುಧಾಕರನ್ ಅವರ ಹೇಳಿಕೆ ಬಂದಿದೆ.
ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಅವರು ನನ್ನ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ, ಅಂತಹ ಯಾವುದೇ ಬದಲಾವಣೆಗಳ ಬಗ್ಗೆ ಪಕ್ಷ ಚರ್ಚೆ ಮಾಡಿಲ್ಲ, ಕೆಪಿಸಿಸಿ ಸ್ಥಾನದಿಂದ ನನ್ನ ಕೆಳಗಿಳಿಸುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಸುಧಾಕರನ್ ಹೇಳಿದರು.
ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಈ ಸಮಯದಲ್ಲಿ ಅಧ್ಯಕ್ಷರ ಬದಲಾವಣೆ ಬಗ್ಗೆ ಅವರು ಯಾವುದೇ ಸೂಚನೆ ನೀಡಲಿಲ್ಲ, ಪಕ್ಷದ ಬಲವರ್ಧನೆ ಬಗ್ಗೆ ಸಲಹೆ ನೀಡಿದರು ಎಂದು ಸುಧಾಕರನ್ ಮಾಹಿತಿ ನೀಡಿದರು.
ನನಗೆ ಆರೋಗ್ಯ ಸರಿ ಇಲ್ಲ ಎಂದು ಪಕ್ಷದ ಒಳಗೆ ಕೆಲವರು ನನ್ನನ್ನು ಪಕ್ಷದಿಂದ ಹೊರ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ನನಗಿಂತ (76 ವರ್ಷ) ಹಿರಿಯರು ಪಕ್ಷದ ಉನ್ನತ ಸ್ಥಾನಗಳನ್ನು ನಿರ್ವಹಣೆ ಮಾಡಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.