ಸನ್ನಿ ಜೋಸೆಪ್
ತಿರುವನಂತಪುರ: ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ಶಾಸಕ ಸನ್ನಿ ಜೋಸೆಪ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿ ಪ್ರಕಟಣೆ ಹೊರಡಿಸಿದೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಈ ಬದಲಾವಣೆ ಮಾಡಿದೆ. ಇದರ ಜೊತೆಗೆ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ.
ಶಾಸಕರಾದ ಪಿ.ಸಿ. ವಿಶ್ವನಾಥ್, ಅನಿಲ್ ಕುಮಾರ್ ಹಾಗೂ ಸಂಸದ ಶಫಿ ಪರಂಬಿಲ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಯುಡಿಎಫ್ ಸಂಚಾಲಕರಾಗಿ ಆಡೂರು ಪ್ರಕಾಶ್ ಅವರನ್ನು ನೇಮಕ ಮಾಡಿ ಮಲ್ಲಿಕಾರ್ಜುನ ಖರ್ಗೆ ಪ್ರಕಟಣೆ ಹೊರಡಿಸಿದ್ದಾರೆ.
ಈ ಹಿಂದೆ ಸುಧಾಕರನ್ ಅವರು ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು. ಇವರ ಆಪ್ತರೇ ಆದ ಸನ್ನಿ ಜೋಸೆಪ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕೆಲವು ದಿನಗಳಿಂದ ಕೇರಳ ಕಾಂಗ್ರೆಸ್‌ನಲ್ಲಿ ಅಧ್ಯಕ್ಷರ ಬದಲಾಣೆಯಾಗಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.