ಬಾಬಾ ರಾಮ್‌ದೇವ್
ತಿರುವನಂತಪುರ: ತಪ್ಪು ದಾರಿಗೆ ಎಳೆಯುವ ಜಾಹೀರಾತು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.
ಇಂಗ್ಲಿಷ್ ಮತ್ತು ಮಲಯಾಳ ಪತ್ರಿಕೆಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಕೇರಳದ ಡ್ರಗ್ಸ್ ಇನ್ಸ್‌ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು.
ಫೆ.1ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆರೋಪಿಗಳಿಗೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಪತಂಜಲಿ ಆಯುರ್ವೇದ್ ಕಂಪನಿಯು ತಾನು ತಯಾರಿಸುವ ಔಷಧಗಳು ಹಲವು ಕಾಯಿಲೆಗಳನ್ನು ವಾಸಿ ಮಾಡುತ್ತವೆ ಎಂದು ಜಾಹೀರಾತಿನಲ್ಲಿ ಹೇಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.