ADVERTISEMENT

ಕೇರಳ ಶಿಕ್ಷಣ ಸಚಿವರ ವಿರುದ್ಧ ಜಾಲತಾಣಗಳಲ್ಲಿ ನಕಲಿ ಪೋಸ್ಟ್‌ಗಳು: ಕ್ರಮಕ್ಕೆ ಸೂಚನೆ

ಪಿಟಿಐ
Published 8 ಜುಲೈ 2025, 14:00 IST
Last Updated 8 ಜುಲೈ 2025, 14:00 IST
   

ತಿರುವನಂತಪುರ: ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ಸುಳ್ಳು ಪೋಸ್ಟ್‌ ಅಭಿಯಾನಕ್ಕೆ ಸಂಬಂಧಿಸಿದಂತೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ ಕುಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಕಲಿ ಪೋಸ್ಟ್‌ ಅಭಿಯಾನದ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಾಗೂ ಸಮಗ್ರವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಶುಕ್ರವಾರದಂದು ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹೊರ ಹೋಗುವುದನ್ನು ನಿಷೇಧಿಸಲಾಗುವುದು ಎಂಬ ಸುಳ್ಳು ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್‌ನಲ್ಲಿ ಶಿವನ್‌ಕುಟ್ಟಿ ಅವರ ತಿರುಚಿದ ಭಾವಚಿತ್ರವೂ ಇದೆ ಎಂದು ಸಚಿವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ದುರುದ್ದೇಶದಿಂದ ಕೂಡಿದ ಅಭಿಯಾನವನ್ನು ರೂಪಿಸಲಾಗಿದೆ. ಶುಕ್ರವಾರದಂದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಧಾರ್ಮಿಕ ವಿಧಿವಿಧಾನಗಳ ಆಚರಣೆಗೆ ಹೊರಗೆ ಹೋಗುವುದನ್ನು ತಡೆಯಲಾಗುತ್ತಿದೆ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಸುಳ್ಳು ಪೋಸ್ಟ್‌ಗಳನ್ನು ಹಂಚಿಕೊಂಡಿರುವವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಶಿವನ್‌ ಕುಟ್ಟಿ ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.