ADVERTISEMENT

ಶಬರಿಮಲೆ ಪ್ರವೇಶ: ಸಿಪಿಎಂ ನಿಲುವಿಗೆ ಬಿಜೆಪಿ, ಕಾಂಗ್ರೆಸ್ ತರಾಟೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 19:04 IST
Last Updated 22 ಮಾರ್ಚ್ 2021, 19:04 IST
ಶಬರಿಮಲೆ
ಶಬರಿಮಲೆ   

ತಿರುವನಂತಪುರ (ಕೇರಳ): ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂಕೋರ್ಟ್‌ಗೆ ತಾನು ಸಲ್ಲಿಸಿರುವ ಪ್ರಮಾಣಪತ್ರಕ್ಕೆ ಬದ್ಧ ಇರುವುದಾಗಿ ಸಿಪಿಎಂ ಸೋಮವಾರ ಸ್ಪಷ್ಟಪಡಿಸಿದೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ ನೀಡಿವೆ.

‘ಈ ವಿಷಯದ ಬಗ್ಗೆ ಎಲ್‌ಡಿಎಫ್ ಸರ್ಕಾರ ತನ್ನ ಮೂಲ ಅರ್ಜಿಯಲ್ಲಿ ತೆಗೆದುಕೊಂಡಿರುವ ನಿಲುವಿಗೆ ಬದ್ಧವಾಗಿದ್ದು, ಅದನ್ನು ಮುಂದುವರಿಸಲಾಗುವುದು’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕಾನಂ ರಾಜೇಂದ್ರನ್ ತಿಳಿಸಿದ್ದಾರೆ.

ಮತ್ತೊಂದೆಡೆ, ಚುನಾವಣಾ ಸಮಯದಲ್ಲಿ ಶಬರಿಮಲೆ ಘಟನೆಯನ್ನು ಚರ್ಚೆಯ ವಿಷಯವನ್ನಾಗಿ ಮಾಡಲು ಕೆಲವರು ಉದ್ದೇಶಪೂರ್ವಕ ಪ್ರಯತ್ನಿಸಿದ್ದಾರೆ ಎಂದು ಸಿಪಿಎಂ ಹೇಳಿದೆ.

ADVERTISEMENT

ಸರ್ಕಾರದ ಪ್ರಮಾಣಪತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ರಾಜೇಂದ್ರನ್ ಅವರ ನಿಲುವಿಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಪವಿತ್ರ ಭೂಮಿಯನ್ನು ಮತ್ತೆ ಗಲಭೆಯ ಸ್ಥಳವನ್ನಾಗಿ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.

‘ರಾಜೇಂದ್ರನ್ ಅವರ ಹೇಳಿಕೆಯು ಮಾರ್ಕ್ಸ್‌ವಾದಿ ಸರ್ಕಾರದ ಅಪ್ರಾಮಾಣಿಕ ನಡೆಯನ್ನು ಬಹಿರಂಗಪಡಿಸಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುರಳೀಧರನ್ ಅವರು ಹೇಳಿದರು. ಸರ್ಕಾರಕ್ಕೆ ಭಕ್ತರ ಮತಗಳು ಬೇಕೇ ಹೊರತು ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಲು ಅದು ಸಿದ್ಧವಿಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.