ADVERTISEMENT

ಕೇರಳ ಆನೆ ಸಾವು ಪ್ರಕರಣ: ಕೇಂದ್ರ, 13 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್‌

ವನ್ಯಜೀವಿಗಳ ಮೇಲೆ ದೌರ್ಜನ್ಯಕ್ಕೆ ತಡೆ

ಪಿಟಿಐ
Published 10 ಜುಲೈ 2020, 10:33 IST
Last Updated 10 ಜುಲೈ 2020, 10:33 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ವನ್ಯ ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ತಡೆಗಟ್ಟುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್‌, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ 13 ರಾಜ್ಯಗಳಿಗೆ ಶುಕ್ರವಾರ ನೋಟಿಸ್‌ ನೀಡಿದೆ.

ವಕೀಲ ಶುಭಂ ಅವಸ್ಥಿ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಕೇರಳದಲ್ಲಿ ಕೆಲವರು ನೀಡಿದ್ದ ಸ್ಫೋಟಕ ತುಂಬಿದ್ದ ಪೈನಾಪಲ್‌ ತಿಂದುಗರ್ಭಿಣಿ ಆನೆಯೊಂದು ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ವಕೀಲ ಅವಸ್ಥಿ ಈ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಆರ್‌.ಸುಭಾಷ್‌ ರೆಡ್ಡಿ, ಎಸ್‌.ಎ.ಬೋಪಣ್ಣ ಅವರಿರುವ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ.

ADVERTISEMENT

ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸಬೇಕು. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ವನ್ಯಜೀವಿಗಳನ್ನು ಓಡಿಸಲು ದೌರ್ಜನ್ಯ ಎಸಗುವುದು, ಬಡಿಗೆ, ಬಲೆ ಅಥವಾ ಸ್ಫೋಟಕಗಳನ್ನು ಬಳಸುವುದು ಕಾನೂನುಬಾಹಿರ ಎಂದು ಘೋಷಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.