ADVERTISEMENT

ಕೇರಳ ಮಾಜಿ ಸಿಎಂ ಅಚ್ಯುತಾನಂದನ್‌ ಆರೋಗ್ಯ ಸ್ಥಿತಿ ಗಂಭೀರ

ಪಿಟಿಐ
Published 30 ಜೂನ್ 2025, 10:00 IST
Last Updated 30 ಜೂನ್ 2025, 10:00 IST
<div class="paragraphs"><p>ಅಚ್ಯುತಾನಂದನ್‌</p></div>

ಅಚ್ಯುತಾನಂದನ್‌

   

(ಚಿತ್ರ ಕೃಪೆ: x/@cpimkarnataka)

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ವಿ. ಎಸ್‌. ಅಚ್ಯುತಾನಂದನ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಇಂದು (ಸೋಮವಾರ) ತಿಳಿಸಿದ್ದಾರೆ.

ADVERTISEMENT

ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ಪ್ರಕಾರ, ಅಚ್ಯುತಾನಂದನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ರಕ್ತದೊತ್ತಡ ಹಾಗೂ ಮೂತ್ರಪಿಂಡದ ಕಾರ್ಯನಿರ್ವಹಣೆ ಇನ್ನೂ ಸಾಮಾನ್ಯ ಸ್ಥಿತಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ 101 ವರ್ಷದ ಅಚ್ಯುತಾನಂದನ್‌ ಅವರನ್ನು ಕಳೆದ ವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡವು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಅಚ್ಯುತಾನಂದನ್ ಅವರು 2006ರಿಂದ 2011ರ ಅವಧಿಯಲ್ಲಿ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.