ADVERTISEMENT

ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೆ ಮೂವರ ಬಂಧನ

ಏಜೆನ್ಸೀಸ್
Published 15 ಜುಲೈ 2020, 3:13 IST
Last Updated 15 ಜುಲೈ 2020, 3:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

ಎರ್ನಾಕುಲಂನ ಜಲಾಲ್‌, ಮಲಪ್ಪುರಂನ ಮೊಹಮ್ಮದ್‌ ಶಫಿ, ಕೊಂಡೋಟ್ಟಿ ಮೂಲಕ ಹಮ್ಜದ್ ಅಲಿ ಬಂಧಿತರಾಗಿದ್ದಾರೆ.

ಆರೋಪಿಗಳನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಂಧಿತರು ಚಿನ್ನವನ್ನು ವ್ಯಾಪಾರಿಗಳಿಗೆ ತಲುಪಿಸುವಲ್ಲಿಪ್ರಮುಖ ಪಾತ್ರವಹಿಸಿದ್ದರು ಎಂದು ಹೇಳಲಾಗಿದೆ.

ADVERTISEMENT

ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್‌ ಮತ್ತು ಸಂದೀಪ್‌ ನಾಯರ್‌ ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಪೊಲೀಸರು ಇತ್ತೀಚಿಗೆ ಬೆಂಗಳೂರಿನಲ್ಲಿ ಬಂಧಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಏಳು ಮಂದಿ ಆರೋಪಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್‌ ಯುಎಇ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಇತ್ತೀಚೆಗೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಪ್ರಕರಣವು ಕೇರಳದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.