ADVERTISEMENT

ತಮಿಳುನಾಡಿನಲ್ಲಿ ಅಕ್ಕಸಾಲಿಗ ಮನೆ ಮೇಲೆ ಎನ್‌ಐಎ ದಾಳಿ

ಕೇರಳ: ಚಿನ್ನ ಕಳ್ಳ ಸಾಗಣೆ ಪ್ರಕರಣ

ಪಿಟಿಐ
Published 9 ಸೆಪ್ಟೆಂಬರ್ 2020, 7:40 IST
Last Updated 9 ಸೆಪ್ಟೆಂಬರ್ 2020, 7:40 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕೊಯಮತ್ತೂರು (ತಮಿಳುನಾಡು): ಕೇರಳದಿಂದ ವರದಿಯಾದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಇಲ್ಲಿನ ಅಕ್ಕಸಾಲಿಗರೊಬ್ಬರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಕುಮಾರ್‌ ಎಂಬುವರ ಮನೆ ಮೇಲೆ ಎನ್ಐಎದ ನಾಲ್ವರು ಸದಸ್ಯರತಂಡ ದಾಳಿ ನಡೆಸಿತು. ನಂದಕುಮಾರ್‌ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಜುಲೈ 5ರಂದು ₹ 14.82 ಕೋಟಿ ಮೌಲ್ಯದ 30 ಕೆ.ಜಿ. ಚಿನ್ನ ಅಕ್ರಮ ಸಾಗಣೆ ಪ್ರಕರಣವನ್ನು ತಿರುವನಂತಪುರದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದರು. ಪ್ರಮುಖ ಸಂಚುಕೋರರಾದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಕಾನ್ಸುಲೇಟ್‌ನ ಮಾಜಿ ಉದ್ಯೋಗಿ ಸ್ವಪ್ನ ಸುರೇಶ್‌ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.