ADVERTISEMENT

ಕೇರಳ|ಪೋಕ್ಸೊ ಪ್ರಕರಣದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ:ಶಿಕ್ಷಣ ಸಚಿವ

ಪಿಟಿಐ
Published 26 ಮೇ 2025, 11:11 IST
Last Updated 26 ಮೇ 2025, 11:11 IST
   

ತಿರುವನಂತಪುರಂ: ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಪೋಕ್ಸೊ ಪ್ರಕರಣ ದಾಖಲಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು ಎಚ್ಚರಿಕೆ ನೀಡಿದರು.

ಸೋಮವಾರ ಪೊಲೀಸ್ ಅಧಿಕಾರಿಗಳ ಸಂಘದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 65 ಶಿಕ್ಷಕರು ಹಾಗೂ 12 ಬೋಧಕೇತರ ಸಿಬ್ಬಂದಿಗಳು ಸೇರಿದಂತೆ 77 ಜನರ ಮೇಲೆ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಪೋಕ್ಸೊ ಪ್ರಕರಣದಲ್ಲಿ ಸಿಲುಕಿರುವ 65 ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಉಳಿದ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಪೋಕ್ಸೊ ಪ್ರಕರಣಗಳ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸಲಹೆ ನೀಡಿದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.