ADVERTISEMENT

ಶಬರಿಮಲೆ ಪ್ರತಿಭಟನಾಕಾರರ ವಿರುದ್ಧ ಮೊಕದ್ದಮೆ ವಾಪಸ್‌

ಪಿಟಿಐ
Published 24 ಫೆಬ್ರುವರಿ 2021, 12:41 IST
Last Updated 24 ಫೆಬ್ರುವರಿ 2021, 12:41 IST
ಪಿಣರಾಯಿ ವಿಜಯನ್‌
ಪಿಣರಾಯಿ ವಿಜಯನ್‌   

ತಿರುವನಂತಪುರ: ಕೇರಳದಲ್ಲಿ ಶಬರಿಮಲೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಂಭೀರವಲ್ಲದ ಕ್ರಿಮಿನಲ್‌ ಪ್ರಕರಣಗಳನ್ನು ವಾಪಸ್‌ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ ನಡೆಯುವ ಮುನ್ನ ಕೈಗೊಂಡಿರುವ ಈ ನಿರ್ಧಾರವನ್ನು ಕಾಂಗ್ರೆಸ್‌ ಸ್ವಾಗತಿಸಿದೆ.

ADVERTISEMENT

2018–19ರಲ್ಲಿ ವಿವಿಧ ಜಿಲ್ಲೆಗಳಲ್ಲಿ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ ಸುಮಾರು ಎರಡು ಸಾವಿರ ಪ್ರಕರಣಗಳು ದಾಖಲಾಗಿದ್ದವು. ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುವಂತೆ ಕೇರಳದ ಪ್ರಮುಖ ಸಂಘಟನೆಯಾದ ನಯ್ಯರ್‌ ಸರ್ವಿಸ್‌ ಸೊಸೈಟಿ (ಎನ್‌ಎಸ್‌ಎಸ್‌) ಆಗ್ರಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.