ADVERTISEMENT

ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್‌ಗೆ ಜಾಮೀನು

ಇತರ ಆರೋಪಿಗಳಿಗೂ ಜಾಮೀನು ನೀಡಿದ ಕೇರಳ ಹೈಕೋರ್ಟ್

ಪಿಟಿಐ
Published 2 ನವೆಂಬರ್ 2021, 10:39 IST
Last Updated 2 ನವೆಂಬರ್ 2021, 10:39 IST
ಸ್ವಪ್ನಾ ಸುರೇಶ್
ಸ್ವಪ್ನಾ ಸುರೇಶ್   

ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಖಲಿಸಿದ್ದ ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಪ್ರಕರಣದಲ್ಲಿ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಕೆ. ವಿನೋದ್‌ಚಂದ್ರನ್ ಮತ್ತು ಸಿ. ಜಯಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠವು ಸ್ವಪ್ನಾ ಸುರೇಶ್ ಜತೆಗೆ ಇತರ ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ಜಾಮೀನು ನೀಡಿದೆ.

ಎನ್‌ಐಎ ದಾಖಲಿಸಿದ್ದ ಪ್ರಕರಣದಲ್ಲಿ ಸ್ವಪ್ನಾ ಅವರಿಗೆ ಜಾಮೀನು ಮಂಜೂರಾಗಿದೆ. ಅವರನ್ನು ಕೋಫೆಪೋಸಾ ಕಾಯ್ದೆ (ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಾಣಿಕೆ ಚಟುವಟಿಕೆಗಳ ತಡೆ) ಅಡಿಯಲ್ಲಿ ಬಂಧನದಲ್ಲಿ ಇರಿಸಲಾಗಿರುವುದರಿಂದ ಅವರು ನ್ಯಾಯಾಂಗ ಬಂಧನದಿಂದ ಹೊರಬರಬಹುದು ಎಂದೂ ಸ್ವಪ್ನಾಸುರೇಶ್ ಪರ ವಕೀಲ ಸೂರಜ್ ಟಿ. ಎಲೆಂಜಿಕಲ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.